ಲೋಕಸಭಾ ಚುನಾವಣೆ ರಂಗೇರುತ್ತಿದ್ದು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧೆ ಮಾಡುತ್ತಿದ್ದು, ಶತಯಾಗತಾಯ ಚುನಾವಣೆಯಲ್ಲಿ ಗೆಲ್ಲಲೇಬೇಕೆಂದು ಪಣತೊಟ್ಟಿದ್ದಾರೆ. ಈ ಸಂಬಂಧ ಅವರು ಇಂದು ಬೆಳಗ್ಗೆ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ತೆರಳಿ ಶ್ರೀ ಕಾಲಭೈರವೇಶ್ವರ ದೇವರ ದರ್ಶನ ಪಡೆದು, ಪೂಜೆ ಸಲ್ಲಿಸಿ, ಡಾ. ನಿರ್ಮಲಾನಂದ ನಾಥಸ್ವಾಮೀಜಿಯವರ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭ ನಾಗಮಂಗಲ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ಸುರೇಶ್ ಗೌಡ, ಜೆಡಿಎಸ್ ನಾಯಕರು ಉಪಸ್ಥಿತರಿದ್ದರು.