ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಸಭಾ ಚುನಾವಣಾ ಅಖಾಡಕ್ಕಿಳಿಯುತ್ತಿದ್ದು, ನಾಳೆಯಿಂದ ಮೂರು ದಿನಗಳ ಕಾಲ ಮೈಸೂರು ಪ್ರವಾಸ ಕೈಗೊಂಡಿದ್ದಾರೆ.. ಲೋಕಸಭಾ ಚುನಾವಣೆ ಗೆಲಲ್ಲು ಸಿಎಂ ಭರ್ಜರಿ ತಯಾರಿ ನಡೆಸಿದ್ದು, ಮೈಸೂರು, ಚಾಮರಾಜನಗರ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ.
ನಾಳೆ 10.45 ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿದ್ದು, ಬೆಳಗ್ಗೆ 11 ಗಂಟೆಗೆ ವರುಣ ವಿಧಾನಸಭಾ ಕ್ಷೇತ್ರದ ಬಿಳಿಗೆರೆ ಗ್ರಾಮದಲ್ಲಿ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಟಿ.ನರಸೀಪುರ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದು, ಏಪ್ರಿಲ್ 2ರ ಬೆಳಗ್ಗೆ 10 ಗಂಟೆಗೆ ಶಂಕರಮಠಕ್ಕೆ ಸಿಎಂ ಭೇಟಿ ನೀಡಲಿದ್ದಾರೆ. ನಂತರ 11 ಗಂಟೆಗೆ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಚುನಾವಣಾ ಪ್ರಚಾರ ಮಾಡಲಿದ್ದಾರೆ.
ಇನ್ನು ಸಂಜೆ .4ಕ್ಕೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸಭೆ ಮಾಡಿ ನಂತರ ಚುನಾವಣಾ ಪ್ರಚಾರಕ್ಕೆ ಧುಮುಕಲಿದ್ದಾರೆ. ಏಪ್ರಿಲ್ 3 ರಂದು ಬೆ.9.30ಕ್ಕೆ ಸುತ್ತೂರು ಮಠಕ್ಕೆ ಸಿಎಂ ಭೇಟಿ ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ. ನಂತರ ಬೆಳಗ್ಗೆ 10.35 ಕ್ಕೆ ಚಾಮರಾಜನಗರ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ನಾಮಪತ್ರ ಸಲ್ಲಿಕೆಯಲ್ಲಿಯೂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ನಂತರ ಮಧ್ಯಾಹ್ನ 1 ಗಂಟೆಗೆ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ನಾಮಪತ್ರ ಸಲ್ಲಿಕೆ ವೇಳೆಯಲ್ಲಿಯೂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.