ಮೈಸೂರು : ಲೋಕಸಭೆ ಚುನಾವಣೆಯ ಅಸಲಿ ಯುದ್ಧ ಆರಂಭವಾಗಿದೆ. ಒಂದ್ಕಡೆ ನಾಮಪತ್ರ ಭರಾಟೆ ಜೋರಾಗಿದ್ರೆ, ಮತ್ತೊಂದ್ಕೆಡೆ, ಪ್ರಚಾರ, ಮಾತಿನ ಯುದ್ಧ, ಆಪರೇಷನ್ ಹಸ್ತ ನಡೆಯುತ್ತಿದೆ. ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಆಪರೇಷನ್ ಹಸ್ತದ ಭರಾಟೆ ಜೋರಾಗಿ ನಡೆದಿದ್ದು, ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಸೋದರ ವಿ.ರಾಮಸ್ವಾಮಿ ಅವರಿಗೆ ಕಾಂಗ್ರೆಸ್ ಗಾಳ ಹಾಕಿದ್ದು ಇಂದು ರಾಮಸ್ವಾಮಿ ಸೇರಿ 30 ಮುಖಂಡರು BJP ತೊರೆದು ಕಾಂಗ್ರೆಸ್ ಸೇರಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ 30 ಜನ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಇನ್ನು ಮೈಸೂರು ಕ್ಷೇತ್ರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರೋ ಸಿಎಂ ಸಿದ್ದರಾಮಯ್ಯ, ಮೂರು ದಿನ ಠಿಕಾಣಿ ಹೂಡಿ, ಆಪರೇಷನ್ ಅಸ್ತ್ರ ಹೂಡಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರವಾಸ ಮುಂದುವರೆದಿದೆ. ಮೈಸೂರು-ಕೊಡಗು, ಚಾಮರಾಜನಗರ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಸಿಎಂ ಭಾರಿ ಕಸರತ್ತು ನಡೆಸುತ್ತಿದ್ದಾರೆ. ನಾನಾ ಕಡೆಗಳಿಗೆ ಭೇಟಿ ನೀಡಿ ಸಭೆ ಹಾಗೂ ಚುನಾವಣಾ ಪ್ರಚಾರ ಕೈಗೊಳ್ಳುತ್ತಿದ್ದಾರೆ.