ಬೆಂಗಳೂರು : ಹಳೆ ಮೈಸೂರು ಭಾಗವನ್ನು ಟಾರ್ಗೆಟ್ ಮಾಡಿರುವ ಅಮಿತ್ ಶಾ ಇಂದು ಡಿಕೆ ಬ್ರದರ್ಸ್ ಕೋಟೆಯನ್ನು ಛಿದ್ರ ಮಾಡಲು ತಂತ್ರ ಹೆಣೆಯುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರ ಚನ್ನಪಟ್ಟಣದಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಇದಕ್ಕಾಗಿ ಈಗಾಗಲೇ ದೆಹಲಿಯಿಂದ ನೇರವಾಗಿ ಬೆಂಗಳೂರಿಗೆ ಬಂದಿಳಿದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ತಾಜ್ ವೆಸ್ಟ್ಎಂಡ್ ಹೋಟೆಲ್ನಲ್ಲಿ ಬಿಜೆಪಿ-ಜೆಡಿಎಸ್ ನಾಯಕರ ಜೊತೆ ಬ್ರೇಕ್ಫಾಸ್ಟ್ ಮೀಟಿಂಗ್ ಮಾಡಿದ್ದಾರೆ
ಜೆಡಿಎಸ್ ಬಿಜೆಪಿ ಸಮನ್ವಯ ಕುರಿತು ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಸಂದೇಶ ರವಾನಿಸಿದ್ದಾರೆ. ಈ ಮೀಟಿಂಗ್ನಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೆಗೌಡ, ಮಾಜಿ ಸಚಿವರಾದ ಸಿಎಸ್ ಪುಟ್ಟರಾಜು, ಬಂಡೆಪ್ಪಕಾಶಂಪುರ, ಹೆಚ್.ಕೆ. ಕುಮಾರಸ್ವಾಮಿ, ಸಾರಾ ಮಹೇಶ್, ವೆಂಕಟರಾವ್ ನಾಡಗೌಡ ಉಪಸ್ಥಿತರಿದ್ದರು.