ಪ್ರತಿನಿಧಿ ವರದಿ ಗುಂಡ್ಲುಪೇಟೆ
ಪಟ್ಟಣದ ಹೊರವಲಯದ ಮಲ್ಲಯ್ಯನಪುರ ಗ್ರಾಮದ ಅನ್ಗಲ್ ಗುಡ್ಡದಲ್ಲಿ ಸೋಮವಾರ ರಾತ್ರಿ ವೇಳೆ ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ ಸುಮಾರು 50ಕ್ಕೂ ಹೆಚ್ಚು ಎಕರೆ ಕಾಡು ಪ್ರದೇಶ ಆಕಸ್ಮಿಕ ಬೆಂಕಿಗೆ ಆಹುತಿಯಾಗಿದೆ.
ಆಕಸ್ಮಿಕ ಬೆಂಕಿ ಬಿದ್ದ ಸ್ಥಳವು ಕಂದಾಯ ಇಲಾಖೆಗೆ ಒಳಪಟ್ಟಿದ್ದು, ಗ್ರಾಮದ ಗುಡ್ಡಕ್ಕೆ ಆಕಸ್ಮಿಕ ಬೆಂಕಿ ಬಿದ್ದ ಹಿನ್ನೆಲೆ ಒಣಗಿ ನಿಂತಿದ್ದ ಕುರುಚಲು ಗಿಡಮರಗಳು, ಪೊದೆಗಳು ಸಂಪೂರ್ಣ ಬೆಂಕಿಗಾಹುತಿಯಾಗಿವೆ. ಗುಡ್ಡದ ಮೇಲ್ಬಾಗಕ್ಕೆ ಹತ್ತಿಕೊಂಡ ಬೆಂಕಿ ಸುತ್ತಮುತ್ತಲ ಪ್ರದೇಶವನ್ನು ಆವರಿಸಿ, ಬೆಟ್ಟದ ತಳಭಾಗವೂ ಸುಟ್ಟು ಭಸ್ಮ ಮಾಡಿದೆ.
ಜನರಿಂದ ಬೆಂಕಿ ಬಿದ್ದ ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಅರಣ್ಯಾಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ದೊಡ್ಡ ಪ್ರಮಾಣದ ಬೆಂಕಿ ಅವಘಡವನ್ನು ತಡೆಯುವಲ್ಲಿ ಯಶಸ್ವಿಯಾದರು.