ಪ್ರತಿನಿಧಿ ವರದಿ ಚಾಮರಾಜನಗರ
ತಾಲೂಕಿನ ಎಚ್.ಮೂಕಹಳ್ಳಿ ಗ್ರಾಮದಲ್ಲಿ ರಾಜ್ಯ ಕಬ್ಬು ಬೆಳೆಗಾರ ಸಂಘ ಹಾಗೂ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಗ್ರಾಮ ಘಟಕವನ್ನು ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಸಮ್ಮುಖದಲ್ಲಿ ಉದ್ಘಾಟನೆಯಾಯಿತು.
ಇದೇ ವೇಳೆ ಮಾತನಾಡಿ, ಪ್ರಾಕೃತಿಕ ಬದಲಾವಣೆಯಿಂದ ಕೃಷಿ ಕ್ಷೇತ್ರ ದುರ್ಬಲವಾಗುತ್ತಿದೆ. ಬರಗಾಲದಿಂದ ಬೆಳೆಗಳು ಒಣಗುತ್ತಿವೆ, ಕೊಳವೆ ಬಾವಿಗಳು ಹಿಂಗುತ್ತಿವೆ. ರೈತರು ಹಳ್ಳಿಗಳಲ್ಲಿ ಗುಡಿ, ಗೋಪುರ ಕಟ್ಟುವ ಬದಲು ಕೆರೆ-ಕಟ್ಟೆ ನಿರ್ಮಾಣ ಹಾಗೂ ಪುನಶ್ಚೇತನಗೊಳಿಸುವ ಕಾರ್ಯದಲ್ಲಿ ಶ್ರದ್ಧೆ ವಹಿಸಿದರೆ ಕೊಳವೆ ಬಾವಿಗಳು ಹಾಗೂ ಕೃಷಿ ಕ್ಷೇತ್ರ ಸಮೃದ್ಧಿಯಾಗಲು ಸಹಕಾರಿಯಾಗಲಿದೆ ಎಂದರು.
ರಾಜಕೀಯ ಕ್ಷೇತ್ರ ಹಾಗೂ ರಾಜಕಾರಣಿಗಳಿಂದ ರೈತರಿಗೆ ನ್ಯಾಯ ಸಿಗುವುದಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಪಾಲಿಗೆ ಮರಳುಗಾಡಿನ ಓಯಸಿಸ್ ಇದ್ದಂತೆ. ಪ್ರತಿಯೊಬ್ಬ ರೈತರು ಇದನ್ನು ಅರ್ಥಮಾಡಿಕೊಳ್ಳಬೇಕು. ಬರಗಾಲದಿಂದಾಗಿ ರೈತರಿಗೆ ಕುಡಿಯುವ ನೀರು, ದನಕರುಗಳಿಗೆ ಮೇವು ಸಿಗುತ್ತಿಲ್ಲ. ಅಧಿಕಾರಿಗಳು ಚುನಾವಣಾ ಗುಂಗಿನಲ್ಲಿ ತಲ್ಲಿನರಾಗಿದ್ದಾರೆ ಎಂದರು.
ಜಿಲ್ಲಾ ಕಾರ್ಯದರ್ಶಿ ಮೂಕಹಳ್ಳಿ ಮಹದೇವಸ್ವಾ ಮಿ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಳಿ ದೇವರಾಜ್ ಮಾತನಾಡಿದರು.
ಜಿಲ್ಲಾ ಕಾರ್ಯಧ್ಯಕ್ಷ ಉಡಿಗಾಲ ರೇವಣ್ಣ, ಪ್ರಧಾನ ಕಾರ್ಯದರ್ಶಿ ಕಿರಗಸೂರು ಶಂಕರ, ತಾಲೂಕ ಅಧ್ಯಕ್ಷ ಸತೀಶ್,ಬಸವಣ್ಣ, ಚಂದ್ರಶೇಖ ರ್ಮೂರ್ತಿ, ಗೌಡಹಳ್ಳಿ ಷಡಕ್ಷರಿ, ಹೆಗ್ಗೋಠಾರ ಶಿವಸ್ವಾಮಿ,ಪುಟ್ಟಸ್ವಾಮಿ ಸೇರಿದಂತೆ ಇತರರು ಇದ್ದರು.
2ಸಿಎಚ್ಎನ್.4: ಚಾಮರಾಜನಗರ ತಾಲೂಕಿನ ಎಚ್.ಮೂಕಹ ಳ್ಳಿ ಗ್ರಾಮದಲ್ಲಿ ರಾಜ್ಯ ಕಬ್ಬು ಬೆಳೆಗಾರ ಸಂಘ ಹಾಗೂ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಗ್ರಾಮ ಘಟಕ ಉದ್ಘಾಟನೆಯಾಯಿತು.