ಮಂಡ್ಯ: ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಏ.6 ರಿಂದ 30ರವರೆಗೆ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ.
ಏ.6 ರಂದು ಕೀಲಾರ ಸರ್ಕಾರಿ ಆರೋಗ್ಯ ಕೇಂದ್ರ, 16 ರಂದು ಬಿಂಡಿಗನವಿಲೆ ಸರ್ಕಾರಿ ಆರೋಗ್ಯ ಕೇಂದ್ರ ಹಾಗೂ ಮಧ್ಯಾಹ್ನ 1 ಗಂಟೆಗೆ ನಾಗಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ, 17 ರಂದು ಶಿವಳ್ಳಿ ಸರ್ಕಾರಿ ಆರೋಗ್ಯ ಕೇಂದ್ರ, ಏ. 18 ರಂದು ಮದ್ದೂರು ತಾಲೂಕಿನ ಸರ್ಕಾರಿ ಆರೋಗ್ಯ ಕೇಂದ್ರ, 19 ರಂದು ಅರಕೆರೆ ಸರ್ಕಾರಿ ಆರೋಗ್ಯ ಕೇಂದ್ರ, 20 ರಂದು ಬಸರಾಳು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಿಬಿರ ಆಯೋಜಿಸಲಾಗಿದೆ.
ಏ. 23 ರಂದು ಕೆ.ಎಂ.ದೊಡ್ಡಿ ಸರ್ಕಾರಿ ಆರೋಗ್ಯ ಕೇಂದ್ರ, 24 ರಂದು ಕೆ. ಆರ್. ಪೇಟೆ ತಾಲ್ಲೂಕು ಆಸ್ಪತ್ರೆ, 25 ರಂದು ಕಿರುಗಾವಲು ಸರ್ಕಾರಿ ಆರೋಗ್ಯ ಕೇಂದ್ರ, 30 ರಂದು ಪಾಂಡವಪುರ ಉಪ ವಿಭಾಗ ಆಸ್ಪತ್ರೆಗಳಲ್ಲಿ ಬೆಳಗ್ಗೆ 10 ಗಂಟೆಗೆ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.