ಮೈಸೂರು : ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆದುಕೊಂಡರು. ಬಳಿಕ ಸುತ್ತೂರು ಶ್ರೀಗಳ ಜೊತೆ ಕೆಲಕಾಲ ಮಾತುಕತೆ ನಡೆಸಿದರು. ಈ ವೇಳೆ ಸಿದ್ದರಾಮಯ್ಯಗೆ ಸಿಎಂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ, ಸಚಿವರಾದ ವೆಂಕಟೇಶ್ ಹಾಗೂ ಡಾ.ಎಚ್.ಸಿ ಮಹಾದೇವಪ್ಪ ಸಾಥ್ ನೀಡಿದರು.