ಚಾಮರಾಜನಗರ : ಚಾಮರಾಜನಗರ ಮೀಸಲು ಲೋಕಸಭಾ ಕ್ಷೆತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅಪಾರ ತಮ್ಮ ಕಾಂಗ್ರೆಸ್ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಹೊರಟು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸತೀಶ್ ಜಾರಕಿಹೊಳಿ, ಯತೀಂದ್ರ ಸಿದ್ದರಾಮಯ್ಯ, ಶಾಸಕರಾದ ಗಣೇಶ್ ಪ್ರಸಾದ್, ದರ್ಶನ್ ಧ್ರುವನಾರಾಯಣ, ಅನಿಲ್ ಚಿಕ್ಕಮಾದು, ಎ.ಆರ್. ಕೃಷ್ಣಮೂರ್ತಿ, ಮಾಜಿ ಶಾಸಕ ಆರ್ ನರೇಂದ್ರ, ಎಸ್ ಜಯಣ್ಣ, ಸುನಿಲ್ ಬೋಸ್ ಗೆ ಸಾಥ್ ನೀಡಿದರು.