ಆಸ್ತಿ ತೆರಿಗೆ ಪಾವತಿಸಲು ಮನವಿ
ಪ್ರತಿನಿಧಿ ವರದಿ ಚಾಮರಾಜನಗರ
ಸ್ಥಳೀಯ ನಗರಸಭೆ ವ್ಯಾಪ್ತಿಗೊಳಪಡುವ ಕಟ್ಟಡ, ನಿವೇಶನಗಳ ಮಾಲೀಕರು ಆಸ್ತಿ ತೆರಿಗೆಯನ್ನು ಏ.1 ರಿಂದ 30 ರೊಳಗೆ ಪಾವತಿಸಿದರೆ ಶೇ.5 ರಷ್ಟು ರಿಯಾಯಿತಿ ನೀಡಲಾಗುತ್ತದೆ.
ಮೇ ಮತ್ತು ಜೂನ್ ತಿಂಗಳಲ್ಲಿ ಆಸ್ತಿ ತೆರಿಗೆ ಪಾವತಿಸಿದರೆ ಯಾವುದೇ ದಂಡವಿರುವುದಿಲ್ಲ. ನಂತರ ಜುಲೈ ಮಾ. ಇಂದ ಮಾ.2025 ರವರೆಗೆ ಪ್ರತಿ ಮಾಹೆಗೆ ತೆರಿಗೆ ಮೊತ್ತಕ್ಕೆ ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆದಾರರು ಹಿಂದಿನ ವರ್ಷಗಳ ಕಂದಾಯಗಳಿಗೆ ಶೇ.2ರಷ್ಟು ದಂಡ ಸಮೇತ ಕಡ್ಡಾಯವಾಗಿ ಆಸ್ತಿ ತೆರಿಗೆಯನ್ನು ಪಾವತಿಸಿ, ಸ್ವಯಂ ಘೋಷಿತ ಆಸ್ತಿ ತೆರಿಗೆಯ ಘೋಷಣೆಯನ್ನು ಮಾಡಿಕೊಳ್ಳಬೇಕು.
ನೀರಿನ ಕಂದಾಯ ಬಾಕಿ ಉಳಿಸಿಕೊಂಡಿರುವವರು ಕಂದಾಯವನ್ನು ಕಡ್ಡಾಯವಾಗಿ ಪಾವತಿಸಬೇಕು ಎಂದು ನಗರಸಭೆ ಪೌರಾಯುಕ್ತ ಎಸ್.ವಿ.ರಾಮದಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.