ಮಂಡ್ಯ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಸಲು 6 ನೇ ದಿನವಾದ (ಕೊನೆಯ ದಿನ ) ಏ.4 11 ಅಭ್ಯರ್ಥಿಗಳಿಂದ ಒಟ್ಟು 14 ನಾಮಪತ್ರ ಸಲ್ಲಿಕೆಯಾಗಿರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಕುಮಾರ ತಿಳಿಸಿದ್ದಾರೆ.
ಜನತಾ ದಳ ( ಜಾತ್ಯತೀತ ) ಪಕ್ಷದ ಅಭ್ಯರ್ಥಿಯಾಗಿ ಎಚ್. ಡಿ. ಕುಮಾರಸ್ವಾಮಿ -3 ನಾಮಪತ್ರ, ಪೂರ್ವಾಂಚಲ್ ಮಹಾ ಪಂಚಾಯತ್ ಪಾರ್ಟಿ ಪಕ್ಷದ ಅಭ್ಯರ್ಥಿಯಾಗಿ ಎಚ್. ಡಿ.ರೇವಣ್ಣ -1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಕೆ. ಶಿವಾನಂದ -1 ನಾಮಪತ್ರ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ವೆಂಕಟರಮಣೇಗೌಡ -1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಚಂದನ್ ಗೌಡ ಕೆ -1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಎಲ್. ಡಿ. ನಂದೀಶ – 2 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಚಿಕ್ಕಯ್ಯ -1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಎಸ್. ಅರವಿಂದ್ -1 ನಾಮಪತ್ರ, ಅಖಿಲ್ ಭಾರತ್ ಹಿಂದೂ ಮಹಸಭ ಪಕ್ಷದ ಅಭ್ಯರ್ಥಿಯಾಗಿ ರಂಜಿತ ಎನ್ -1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಶಿವನಂಜಪ್ಪ -1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಇಂದುಕುಮಾರ್ ಎಂ -1 ನಾಮಪತ್ರ ಸಲ್ಲಿಸಿರುತ್ತಾರೆ.