ಮಂಡ್ಯ: ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ಹೆಚ್.ಡಿ.ಕುಮಾರ ಸ್ವಾಮಿ ಅವರು, ₹10.71 ಕೋಟಿ ರೂ. ಮೌಲ್ಯದ ಚರಾಸ್ತಿ, 43.94 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಸೇರಿದಂತೆ 54.65 ಕೋಟಿ. ಮೌಲ್ಯದ ಆಸ್ತಿ ಹೊಂದಿದ್ದಾರೆ.
ಇವರ ಪತ್ನಿ ಅನಿತಾ ಕುಮಾರಸ್ವಾಮಿ ಅವರು 90.32 ಕೋಟಿ ಮೌಲ್ಯದ ಚರಾಸ್ತಿ, 64.07 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಸೇರಿದಂತೆ 154.39 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ. ಕುಮಾರಸ್ವಾಮಿ ಅವರಿಂತ ಪತ್ನಿಯೇ ಶ್ರೀಮಂತೆಯಾಗಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಅವರ ಮೇಲೆ ಎರಡು ಕ್ರಿಮಿನಲ್ ಒಂದು ಎನ್.ಸಿ.ಆರ್. ಸೇರಿದಂತೆ ಮೂರು ಪ್ರಕರಣಗಳಿವೆ. 65ರ ವಯಸ್ಸಿನ ಕುಮಾರಸ್ವಾಮಿ ಬಿ.ಎಸ್ಸಿ ಮುಗಿಸಿದ್ದು, ತಮ್ಮ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಈ ಎಲ್ಲ ವಿವರಗಳನ್ನು ನೀಡಿದ್ದಾರೆ.
ಕುಮಾರಸ್ವಾಮಿ ಅವರು ಸಂಪೂರ್ಣ ರಾಜಕೀಯ ಹಿನ್ನಲೆಯುಳ್ಳ ಕುಟುಂಬದಿಂದ ಬಂದವರಾಗಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪುತ್ರರಾಗಿದ್ದು, ಇವರೂ ಕೂಡ ಎರಡು ಬಾರಿ ಮುಖ್ಮಮಂತ್ರಿ ಯಾಗಿದ್ದರು.