ಕೂಡಿಗೆ ; ಹೆಗ್ಗಡಹಳ್ಳಿ ಶ್ರೀ ಹರಕೆ ಚೌಡೇಶ್ವರಿ ದೇವಿ ವಾರ್ಷಿಕೋತ್ಸವ ಶುಕ್ರವಾರ ನೆರವೇರಿತು.
ಬೆಳಗ್ಗೆ ದೇವಿಗೆ ವಿವಿಧ ಪುಷ್ಪ ಅಲಂಕಾರ, ವಿವಿಧ ಹೋಮ ಹವನಗಳು ಹಾಗೂ ಪೂಜಾ ಕೈಂಕರ್ಯಗಳು ನೆರವೇರಿದವು.
ಮಧ್ಯಾಹ್ನ ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿನಿಯೋಗ ಮತ್ತು ಅನ್ನಸಂತರ್ಪಣೆ ಕಾರ್ಯಕ್ರಮ ನೆರವೇರಿತು. ಸಂಜೆ ದೀಪಾಲಂಕಾರ ಮತ್ತು ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ತೀರ್ಥ ಪ್ರಸಾದ ವಿನಿಯೋಗ ಹಾಗೂ ಅನ್ನ ಸಂತರ್ಪಣ ಕಾರ್ಯಕ್ರಮವು ನೆರವೇರಿದವು. ಮೈಸೂರು ಮತ್ತು ಹಾಸನ ಜಿಲ್ಲೆಗಳಿಂದಲೂ ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದರು.
Leave a comment