ಮಡಿಕೇರಿ ; ಮಡಿಕೇರಿ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಸಂಪಾಜೆ ಫೀಡರ್ ವಿದ್ಯುತ್ ಮಾರ್ಗದಲ್ಲಿ ನಿರ್ವಹಣೆ ಹಿನ್ನೆಲೆ, ಏಪ್ರಿಲ್, 6 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಕಾಟಕೇರಿ, ಮದೆನಾಡು, ಜೋಡುಪಾಲ, ದೇವರಕೊಲ್ಲಿ, ಕೊಯನಾಡು, ಸಂಪಾಜೆ, ಚೆಂಬು ಹಾಗೂ ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆ ತಿಳಿಸಿದೆ.
Leave a comment