ಬೇಲೂರು: ತಾಲೂಕಿನ ಅರೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಬಾಲಗುಲಿ ಗ್ರಾಮದಲ್ಲಿ ಕಾಡಾನೆ ದಾಳಿ ನಡೆಸಿದ ಪರಿಣಾಮ ಕಾರ್ಮಿಕನಿಗೆ ಗಂಭೀರ ಗಾಯಗಳಾಗಿದ್ದು ಕೂದಲೆಳೆ ಅಂತರದಲ್ಲಿ ಪ್ರಾಣ ಉಳಿಸಿಕೊಂಡಿರುವ ಘಟನೆ ಶುಕ್ರವಾರ ಸಂಜೆ ನಡೆಸಿದೆ.
ಸಕಲೇಶಪುರ ತಾಲ್ಲೂಕಿನ ಹಲಸುಲಿಗೆ ಗ್ರಾಮದ ರಾಘವೇಂದ್ರ (೩೩) ಗಾಯಾಳು. ಬಾಲಗುಲಿ ಗ್ರಾಮದ ಮಲ್ಲೇಶ್ಗೌಡ ಎಂಬುವವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ಆತ ಟ್ಯಾಂಕ್ನಿಂದ ನೀರು ತರಲು ಹೋಗಿದ್ದ ವೇಳೆ ಒಂಟಿ ಸಲಗ ಏಕಾಏಕಿ ದಾಳಿ ನಡೆಸಿತು. ಹರ ಸಾಹಸಪಟ್ಟು ಪ್ರಾಣ ಉಳಿಸಿಕೊಂಡ ರಾಘವೇಂದ್ರ ಅವರಿಗೆ ಗಂಭೀರ ಗಾಯಗಳಾಗಿದ್ದು ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Leave a comment