ಬೆಂಗಳೂರು: ರಾಜ್ಯದಲ್ಲಿ ಕಾಲರಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಹೌದು, ಬೆಂಗಳೂರು ನಗರ ವ್ಯಾಪ್ತಿಯಲ್ಲಿಯೇ 6 ಕಾಲರಾ ಕೇಸ್ ಗಳು ಪತ್ತೆಯಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ 3 ಮತ್ತು ರಾಮನಗರ ಜಿಲ್ಲೆಯಲ್ಲಿ 1 ಕೇಸ್ ಬೆಳಕಿಗೆ ಬಂದಿದೆ. ಈ ಮೂಲಕ 10ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 4 ವರ್ಷಗಳ ಕಾಲರಾ ಪ್ರಕರಣಗಳ ಅಂಕಿ ಅಂಶಗಳನ್ನು ನೋಡಿದರೆ, ಪ್ರತಿವರ್ಷ ಕ್ರಮವಾಗಿ 30, 40, 48 ಪ್ರಕರಣಗಳು ದಾಖಲಾಗಿದೆ. ಆದರೆ, ಈ ಬಾರಿ ಈಗಾಗಲೇ ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ 6 ರಿಂದ 7 ಪ್ರಕರಣಗಳು ವರದಿಯಾಗಿವೆ.