ಮೈಸೂರು: ಹೊಳೆನರಸೀಪುರಕ್ಕಿಂತ ಒಂದು ಮತ ಹೆಚ್ಚು ಲೀಡ್ ಹಾಸನದಲ್ಲಿ ಬರುತ್ತೆ, ಇದಕ್ಕಿಂತ ಇನೇನ್ನು ಹೇಳಬೇಕು ಹೇಳಿ ಎಂದು ಮೈಸೂರಿನಲ್ಲಿ ಮಾಜಿ ಶಾಸಕ ಪ್ರೀತಂಗೌಡ ಸ್ಪಷ್ಟನೆ ನೀಡಿದ್ದಾರೆ. ಹೊಳೆ ನರಸೀಪುರದಲ್ಲಿ ಶಾಸಕರು ಯಾರು? ಅಭ್ಯರ್ಥಿಯ ತಂದೆ ಅಲ್ವ ? ಅವರಿಗಿಂತ ಹೆಚ್ಚು ಲೀಡ್ ಹಾಸನದಲ್ಲಿ ಬರುತ್ತೆ. ನಾನು ಇಂದು ರಾತ್ರಿ ಹಬ್ಬಕ್ಕೆ ಹಾಸನಕ್ಕೆ ಹೋಗುತ್ತೇನೆ. ನಮ್ಮ ಯಾವ ಬೆಂಬಲಿಗರು ಕಾಂಗ್ರೆಸ್ ಜತೆ ಹೋಗಿಲ್ಲ. ಈಗ ಯಾರೋ ಹೋಗಿರುವ ಒಬ್ಬ ಬೂತ್ ಅಧ್ಯಕ್ಷ ಕೂಡ ಅಲ್ಲ. ಪಾಂಪ್ಲೆಟ್ ಪಡೆದ ಕೂಡಲೇ ಕಾಂಗ್ರೆಸ್ ಸೇರಿದಂತೆ ಆಗಲ್ಲ. ನಾವೇ ಕಾಂಗ್ರೆಸ್ ನವರನ್ನು ಇಲ್ಲಿಗೆ ಕರೆದುಕೊಂಡು ಬರುವ ಪ್ರಯತ್ನ ಮಾಡುತ್ತಿದ್ದೇನೆ. ಇಲ್ಲಿಂದ ಅಲ್ಲಿಗೆ ಹೋಗೋ ಪ್ರಶ್ನೆ ಯಾರಿಗೆ ಬರುತ್ತದೆ. ನಮ್ಮ ಕಾರ್ಯಕರ್ತರ ಪ್ರತ್ಯೇಕ ಸಭೆಯ ಅಗತ್ಯ ಏನು ಇಲ್ಲ. 2ನೇ ತಾರೀಕು ಸಭೆ ಮಾಡಿ ಕೆಲಸ ಮಾಡಲು ಹೇಳಿದ್ದೇನೆ. ಎಲ್ಲರೂ ಎನ್ ಡಿ ಎ ಅಭ್ಯರ್ಥಿ ಪರ ಕೆಲಸ ಮಾಡುತ್ತಿದ್ದಾರೆ. ಸುಮ್ಮನೆ ಪದೇ ಪದೆ ಎಲ್ಲಾ ಊಹಾಪೋಹಗಳಿಗೆ ಉತ್ತರ ಕೊಡಲು ಆಗುವುದಿಲ್ಲ. ಎನ್.ಡಿ.ಎ ಅಭ್ಯರ್ಥಿ ಪರ ಕೆಲಸ ಮಾಡುತ್ತೇವೆ. ಎಲ್ಲರನ್ನೂ ಗೆಲ್ಲಿಸುತ್ತೇವೆ. ಮೈಸೂರಿನಲ್ಲಿ ಮಾಜಿ ಶಾಸಕ ಪ್ರೀತಂಗೌಡ ಹೇಳಿಕೆ ನೀಡಿದ್ದಾರೆ.