ಮೈಸೂರು: ನನ್ನ ರಾಜಕೀಯ ಅವತಾರವನ್ನು ಜನ ಸ್ವೀಕಾರ ಮಾಡಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಹುಣಸೂರಿನಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ರಾಜಪ್ರಭುತ್ವದ ಪರಂಪರೆ, ಪ್ರಜಾಪ್ರಭುತ್ವ ಬೇರೆ ಬೇರೆ. ನಾನು ಅಭ್ಯರ್ಥಿಯಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದೇನೆ. ಎಲ್ಲ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿ ಆಗಬೇಕು ಎಂದು ಯದುವೀರ್ ಒಡೆಯರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.