2023-24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಪಟ್ಟಣದ ಪ್ರತಿಷ್ಠಿತ ಆಲ್ಫಾ ಪಿಯು ಕಾಲೇಜು ತಾಲೂಕಿನಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ.
ವಿಜ್ಞಾನ ವಿಭಾಗದಲ್ಲಿ ಕೆ.ಸಿ.ಪವನ್ ಹಾಗೂ ಕೆ.ಎಸ್.ಗಾನವಿ 600 ಕ್ಕೆ 579 ಅಂಕಗಳನ್ನು ಪಡೆದುಕೊಂಡು ತಾಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಸಾಜಿಯಾ ಖಾನ್ ಕಾಲೇಜಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಕಾಲೇಜಿನ ಶೇ. 99 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ. 100 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ 62 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 65 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಾಣಿಜ್ಯ ವಿಭಾಗದ ಒಟ್ಟು 28 ವಿದ್ಯಾರ್ಥಿಗಳಲ್ಲಿ 15 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 8 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 5 ಮಂದಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಸಂಸ್ಥೆಯ ಅಧ್ಯಕ್ಷ ಡಿ.ಎಂ.ರವಿಕುಮಾರ್, ಕಾರ್ಯದರ್ಶಿ ವೈ.ಎಸ್.ಸುಬ್ರಮಣ್ಯ, ಪ್ರಾಂಶುಪಾಲ ಎಸ್.ನವೀನ, ಉಪನ್ಯಾಸಕರು, ಬೋಧಕೇತರ ವರ್ಗ ತೇರ್ಗಡೆ ಹೊಂದಿದ ಎಲ್ಲ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಅಭಿನಂದಿಸಿದರು.
10 ಕೆ.ಸಿ.ಪವನ್-1
10 ಕೆ.ಎಸ್.ಗಾನವಿ-2
10 ಸಾಜಿಯಾ ಖಾನಂ-3