ಮೈಸೂರು: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು ರಾಜ್ಯದಲ್ಲಿ ನಾಯಕರ ಪ್ರಚಾರವು ಕೂಡ ಅಬ್ಬರಿಸುತ್ತಿದೆ. ಇದಕ್ಕೆ ಪೂರಕವೆಂಬಂತೆ ಸಂಸದ ಶ್ರೀನಿವಾಸ ಪ್ರಸಾದ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿರುವುದು ರಾಜ್ಯ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆಯಾಗಿದೆ. ಮೈಸೂರಿನ ಜಯಲಕ್ಷ್ಮಿ ಪುರಂ ನಿವಾಸದಲ್ಲಿರುವ ಶ್ರೀನಿವಾಸ ಪ್ರಸಾದ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ. ಇನ್ನು ಕಳೆದ ಹಲವು ವರ್ಷಗಳಿಂದ ಸಿದ್ದರಾಮಯ್ಯರಿಂದ ಶ್ರೀನಿವಾಸ ಪ್ರಸಾದ್ ದೂರವೇ ಉಳಿದಿದ್ದರು. ಆದರೆ ಈಗ ಈ ಉಭಯ ನಾಯಕರ ಭೇಟಿ ಮಹತ್ವ ಪಡೆದುಕೊಂಡಿದ್ದು ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಗೆ ಸಂಸದ ಶ್ರೀನಿವಾಸ್ ಪ್ರಸಾದ್ ಬೆಂಬಲ ಸೂಚಿಸುತ್ತಾರಾ ಎಂಬುದು ಪ್ರಶ್ನೆಯಾಗಿದೆ.