ಮೈಸೂರು: ಮುನಿಸು ಮರೆತು ಶ್ರೀನಿವಾಸ್ ಪ್ರಸಾದ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಶ್ರೀನಿವಾಸ್ ಪ್ರಸಾದ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನಲೆ ಉಭಯ ನಾಯಕರ ಭೇಟಿ ಮಹತ್ವ ಪಡೆದುಕೊಂಡಿದೆ. ಶ್ರೀನಿವಾಸ್ ಪ್ರಸಾದ್ ಮನೆಗೆ ನಾನು ಹೋಗಲ್ಲ ಅಂತ ಸಿಎಂ ಸಿದ್ದರಾಮಯ್ಯ ವಾರದ ಹಿಂದೆ ಹೇಳಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಒಂದೇ ವಾರದಲ್ಲಿ ನಿಲುವು ಬದಲಾಯಿಸಿಕೊಂಡಿದ್ದಾರೆ. ಶ್ರೀನಿವಾಸ್ ಪ್ರಸಾದ್ ಮನೆಗೆ ಹೋಗದಿದ್ದರೆ ದುಬಾರಿ ಬೆಲೆ ತೆತ್ತಬೇಕಾಗುತ್ತೆ ಎಂಬ ಸುಳಿವು ಸಿಕ್ಕಿದ್ದೇ ತಡ ಪ್ರಸಾದ್ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಶ್ರೀನಿವಾಸ್ ಪ್ರಸಾದ್ ಭೇಟಿ ಮಾಡದಿದ್ದರೆ ಆಗುವ ನಷ್ಟದ ಬಗ್ಗೆ ಶುಕ್ರವಾರ ರಾತ್ರಿ ಸ್ಥಳೀಯ ನಾಯಕರು ವಿವರಣೆ ಕೊಟ್ಟಿದ್ದರು. ಈ ಕಾರಣದಿಂದಲೇ ಶ್ರೀನಿವಾಸ್ ಪ್ರಸಾದ್ ಭೇಟಿಯಾಗಿದ್ದಾರೆ ಎನ್ನಲಾಗಿದೆ.