ಮಂಡ್ಯ: ತಾಲೂಕಿನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಸಂವಿಧಾನದ ಆಶಯದೊಂದಿಗೆ ಇಂಡಿಯಾ ಘಟಬಂಧನ್ ಇದೆ. ಮತ್ತೊಂದೆಡೆ ಸಾಂವಿಧಾನಿಕ ಸಂಸ್ಥೆಗಳನ್ನು ಹಾಳು ಮಾಡಿದ ಬಿಜೆಪಿ ಇದೆ. ಅವರು 25 ಜನರ ಅನುಕೂಲಕ್ಕಾಗಿ ಇದ್ದಾರೆ. ನಾವು ಜನರ, ಬಡವರ ಪರವಾಗಿ ಇದ್ದೇವೆ. ಚುನಾವಣೆ ಸಂದರ್ಭದಲ್ಲಿ ಐದು ಚುನಾವಣೆ ಸಂದರ್ಭದಲ್ಲಿ ಐದು ಗ್ಯಾರಂಟಿ ಘೋಷಿಸಿದ್ದರು. ಈಗ ಎಲ್ಲ ಐದು ಗ್ಯಾರಂಟಿ ಜಾರಿ ಮಾಡಿದ್ದೇವೆ. ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರಿಗೆ ಅನುಕೂಲ ಆಗುತ್ತಿದೆ. ಗೃಹಜ್ಯೋತಿ, ಅನ್ನಭಾಗ್ಯ, ಯುವ ನಿಧಿ, ಶಕ್ತಿ ಯೋಜನೆ ಜಾರಿ ಮಾಡಿದ್ದೇವೆ ಎಂದರು.