ಚಿಕ್ಕಮಗಳೂರು: ತಾಲೂಕಿನ ಚಂದ್ರದ್ರೋಣ ಪರ್ವತದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್ ಪಲ್ಟಿಯಾಗಿ 100 ಅಡಿ ಕಂದಕಕ್ಕೆ ಉರುಳಿ ಬಿದ್ದಿದೆ. ಈ ವೇಳೆ 23 ಜನರಿಗೆ ಸಣ್ಣಪುಟ್ಟ ಗಾಯವಾದರೆ, 6 ಜನರಿಗೆ ಗಂಭೀರ ಗಾಯವಾಗಿದ್ದು, ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಇವರೆಲ್ಲರೂ ತುಮಕೂರು ಜಿಲ್ಲೆಯ ಶಿರಾ ತಾಲೂಕಿನಿಂದ ಮಾಣಿಕ್ಯಾಧಾರ, ದತ್ತಪೀಠ, ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ದತ್ತಪೀಠ-ಮಾಣಿಕ್ಯಾಧಾರ ಮಾರ್ಗ ಮಧ್ಯೆ ದುರ್ಘಟನೆ ನಡೆದಿದೆ.