ಸಿಲ್ಹೆಟ್ನಲ್ಲಿ ನಡೆದ ಆತಿಥೇಯ ಬಾಂಗ್ಲಾದೇಶ್ ಮಹಿಳಾ ತಂಡದ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ ಭಾರತ ಮಹಿಳಾ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಬಾಂಗ್ಲಾ ಪರ ಮುರ್ಶಿದಾ ಖಾತೂನ್ (46) ಉತ್ತಮ ಆರಂಭ ಒದಗಿಸಿದ್ದರು.
ಆದರೆ ಉಳಿದ ಬ್ಯಾಟರ್ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಇತ್ತ ಟೀಮ್ ಇಂಡಿಯಾ ಪರ ಸ್ಪಿನ್ ಮೋಡಿ ಮಾಡಿದ ರಾಧಾ ಯಾದವ್ 3 ವಿಕೆಟ್ ಕಬಳಿಸುವ ಮೂಲಕ ಬಾಂಗ್ಲಾದೇಶ್ ತಂಡದ ರನ್ ಗತಿಯನ್ನು ನಿಯಂತ್ರಿಸಿದರು. ಪರಿಣಾಮ 20 ಓವರ್ಗಳಲ್ಲಿ ಬಾಂಗ್ಲಾದೇಶ್ ತಂಡವು 119 ರನ್ಗಳಿಸಿ ಆಲೌಟ್ ಆಯಿತು.
120 ರನ್ಗಳ ಗುರಿ ಬೆನ್ನತ್ತಿದ ಭಾರತ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಶಫಾಲಿ ವರ್ಮಾ (0) ಶೂನ್ಯಕ್ಕೆ ಔಟಾಗಿ ನಿರ್ಗಮಿಸಿದ್ದರು. ಇದಾಗ್ಯೂ 5.2 ಓವರ್ಗಳಲ್ಲಿ ಟೀಮ್ ಇಂಡಿಯಾ 47 ರನ್ ಕಲೆಹಾಕಿತು. ಈ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು. ಅಲ್ಲದೆ ಫಲಿತಾಂಶ ನಿರ್ಧರಿಸಲು ಡಿಎಲ್ಎಸ್ ನಿಯಮದ ಮೊರೆ ಹೋಗಲಾಯಿತು. ಡಕ್ವರ್ಥ್ ಲೂಯಿಸ್ ನಿಯಮದ ಪ್ರಕಾರ ಭಾರತ ತಂಡವು ಈ ಪಂದ್ಯವನ್ನು 19 ರನ್ಗಳ ಜಯ ಸಾಧಿಸಿದೆ.
ಈ ಗೆಲುವಿನೊಂದಿಗೆ 5 ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ತಂಡವು 2-0 ಅಂತರದಿಂದ ಮುನ್ನಡೆ ಸಾಧಿಸಿದೆ. ಇದಕ್ಕೂ ಮುನ್ನ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 44 ರನ್ಗಳ ಭರ್ಜರಿ ಜಯ ಸಾಧಿಸಿತ್ತು.
ಬಾಂಗ್ಲಾದೇಶ್ ಪ್ಲೇಯಿಂಗ್ 11: ದಿಲಾರಾ ಅಕ್ತರ್ , ಮುರ್ಶಿದಾ ಖಾತುನ್ , ಸೋಭಾನಾ ಮೊಸ್ತರಿ , ನಿಗರ್ ಸುಲ್ತಾನಾ (ನಾಯಕಿ) , ಫಾಹಿಮಾ ಖಾತುನ್ , ರಿತು ಮೋನಿ , ನಹಿದಾ ಅಕ್ತರ್ , ರಬೇಯಾ ಖಾನ್ , ಸುಲ್ತಾನಾ ಖಾತುನ್ , ಮಾರುಫಾ ಅಕ್ಟರ್ , ಫರಿಹಾ ತ್ರಿಸ್ನಾ.
ಭಾರತ ಪ್ಲೇಯಿಂಗ್ 11: ಸ್ಮೃತಿ ಮಂಧಾನ , ಶಫಾಲಿ ವರ್ಮಾ , ದಯಾಳನ್ ಹೇಮಲತಾ , ಹರ್ಮನ್ಪ್ರೀತ್ ಕೌರ್ (ನಾಯಕಿ) , ರಿಚಾ ಘೋಷ್ ( ವಿಕೆಟ್ ಕೀಪರ್ ) , ಎಸ್ ಸಜನಾ , ದೀಪ್ತಿ ಶರ್ಮಾ , ಪೂಜಾ ವಸ್ತ್ರಾಕರ್ , ಶ್ರೇಯಾಂಕಾ ಪಾಟೀಲ್ , ರಾಧಾ ಯಾದವ್ , ರೇಣುಕಾ ಠಾಕೂರ್ ಸಿಂಗ್.