ಒಟ್ಟು 2.59.17.493 ಮತದಾರರು ಮತ ಚಲಾವಣೆ ಮಾಡಲಿದ್ದಾರೆ. 1.29.48.978 ಪುರುಷರು, 1.29.66.570 ಮಹಿಳೆಯರು, ಇತರೆ 1.945 ಮತದಾರರು ಮತ ಚಲಾಯಿಸಲಿದ್ದಾರೆ. 3.78.144 ಯುವ ಪುರುಷ ಮತದಾರರು ಇದ್ದಾರೆ. ಯುವ 3.12.703 ಮಹಿಳಾ ಮತದಾರರು ಇದ್ದಾರೆ. ಒಟ್ಟು 6.90.929 ಯುವ ಮತದಾರರಿದ್ದಾರೆ. 85 ವರ್ಷ ಮೇಲ್ಪಟ್ಟವರು 2.29.263 ಜನರು ಇದ್ದಾರೆ. 3.43.966 ದಿವ್ಯಾಂಗ ಮತದಾರರ ಹೆಸರು ಮತದಾನ ಪಟ್ಟಿಯಲ್ಲಿದೆ. ಕಲಬುರಗಿ ಲೋಕಸಭಾ ಕ್ಷೇತ್ರ ಅತಿ ಹೆಚ್ಚು ಮತಗಳನ್ನು ಹೊಂದಿದೆ. ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ 20.98.202 ಮತದಾರರು ಪಟ್ಟಿಯಲ್ಲಿದ್ದಾರೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಅತಿ ಕಡಿಮೆ ಮತದಾರರನ್ನು ಹೊಂದಿದೆ. ಉತ್ತರ ಕನ್ನಡದಲ್ಲಿ 16.41.156 ಮತದಾರರು ಇದ್ದಾರೆ. ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ