ಕೊಪ್ಪಳ: ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ವಿಠಲಾಪುರ ಬಡಾವಣೆ ನಿವಾಸಿಗಳು ಮತದಾನ ಬಹಿಷ್ಕಾರ ಮಾಡಿದ್ದಾರೆ. ವಾರದ ಹಿಂದೆ ಇದೇ ಬಡಾವಣೆಯ ನಿವಾಸಿ ಲಕ್ಷ್ಮಿ ಎಂಬುವರು ಹೆರಿಗೆ ಸಮಯದಲ್ಲಿ ಮೃತಪಟ್ಟಿದ್ದಾರೆ. ಮಗ ಕೂಡ ಮೃತಪಟ್ಟಿದೆ. ವೈದ್ಯರ ನಿರ್ಲಕ್ಷ್ಯ ದಿಂದ ತಾಯಿ-ಮಗು ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಮತ್ತು ಬಡಾವಣೆಯ ಜನ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಡಾವಣೆ ನಿವಾಸಿಗಳು ಮತದಾನ ಬಹಿಷ್ಕರಿಸಿದ್ದಾರೆ.