ಮೈಸೂರು: ಪ್ರಜ್ವಲ್ ರೇವಣ್ಣ ಓಡಿ ಹೋಗಲು ರಾಜ್ಯ ಸರ್ಕಾರ ಕಾರಣವಾಗಿದ್ದು, ಇದರ ಮಧ್ಯೆ ಪ್ರಧಾನಿ ಮೋದಿ, ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿಗೂ ಏನು ಸಂಬಂಧ ? ಎಂದು ಶಾಸಕ ಜಿ.ಟಿ.ದೇವೇಗೌಡ ಪ್ರಶ್ನೆ ರಾಜ್ಯಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಎಸ್ಐಟಿ ಪೆನ್ ಡ್ರೈವ್ ಹಂಚಿದವರ ವಿರುದ್ಧ ಕ್ರಮ ಕೈಗೊಂಡಿಲ್ಲ. ವಕೀಲ ದೇವರಾಜೇಗೌಡ ಆಡಿಯೋ ಬಿಡುಗಡೆ ಮಾಡಿದ್ದಾರೆ. ರಾಜ್ಯ ಸರ್ಕಾರದ ಅಧೀನದಲ್ಲಿ ಎಸ್ಐಟಿ ಇದೆ. ಸಿಬಿಐಗೆ ವಹಿಸಿದರೆ ಕೇಂದ್ರ ಸರ್ಕಾರಕ್ಕೆ ಹೋಗುತ್ತೆ ಅಂತ ಹಿಂದೇಟು ಹಾಕುತ್ತಿದ್ದೀರಿ. ನ್ಯಾಯಾಂಗ ತನಿಖೆಗೆ ಒಪ್ಪಿಸಿ. ಉಪಮುಖ್ಯಮಂತ್ರಿ ನೇರವಾಗಿ ಪ್ರಕರಣದಲ್ಲಿ ಭಾಗಿ ಆಗಿದ್ದಾರೆ. ಕೂಡಲೇ ಡಿ.ಕೆ.ಶಿವಕುಮಾರ್ ರಾಜೀನಾಮೆ ಪಡೆಯಬೇಕು ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಆಗ್ರಹಿಸಿದ್ದಾರೆ.