ಬೆಂಗಳೂರು: ಹೆಚ್ಡಿ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಮೇ.08) ನ್ಯಾಯಾಂಗ ಬಂಧನಕ್ಕೆ ವಿಧಿಸಿ ಕೋರ್ಟ್ ಆದೇಶಿಸಿದೆ. ಹೌದು, ಏಳು ದಿನದವರೆಗೆ ಅಂದರೆ ಮೇ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದೆ. ಈ ಹಿನ್ನಲೆ ರೇವಣ್ಣರನ್ನು ಎಸ್ಐಟಿ ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯುತ್ತಿದ್ದಾರೆ.