ಬೆಂಗಳೂರು: ಬೆಂಗಳೂರಿನಲ್ಲಿ ನೀರು ನಿರ್ವಹಣೆ ಮತ್ತು ಪ್ರವಾಹ ಪರಿಸ್ಥಿತಿ ಕಡಿಮೆ ಮಾಡುವ ಉಪಕ್ರಮಗಳಿಗೆ 3,000 ಕೋಟಿ ರೂ. ಸಾಲದ ರೂಪದ ಅನುದಾನ ನೀಡಲು ವಿಶ್ವಬ್ಯಾಂಕ್ ಮುಂದೆ ಬಂದಿದೆ. ಈ ಕುರಿತ ಪ್ರಸ್ತಾವನೆಗೆ ಸುಮಾರು ಒಂದು ತಿಂಗಳ ಹಿಂದೆ ಆರ್ಥಿಕ ವ್ಯವಹಾರಗಳ ಇಲಾಖೆ ಗ್ರೀನ್ ಸಿಗ್ನಲ್ ನೀಡಿದ್ದು, ಮುಂದಿನ ಹಂತಗಳ ಬಗ್ಗೆ ಬಿಬಿಎಂಪಿ ಇತ್ತೀಚೆಗೆ ವಿಶ್ವಬ್ಯಾಂಕ್ ಪ್ರತಿನಿಧಿಗಳೊಂದಿಗೆ ಮೊದಲ ಸಭೆ ನಡೆಸಿದೆ. ಒಪ್ಪಂದಕ್ಕೆ ಸಹಿ ಹಾಕಿದ ನಂತರ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಾಲದ ಮೊತ್ತವನ್ನು ಕ್ರಮವಾಗಿ 2,000 ಕೋಟಿ ಮತ್ತು 1,000 ಕೋಟಿ ರೂ. ಆಗಿ ಹಂಚಿಕೊಳ್ಳಲಿದೆ.