ಮಂಗಳೂರು: ಉತ್ತಮ ಸಾಮಾಜದ ನಿರ್ಮಾಣದ ಶಕ್ತಿ ಮಾಧ್ಯಮ ಗಳಿಗಿದೆ. ಮುಖ್ಯವಾಗಿ ಯುವಜನರಲ್ಲಿ ಶೈಕ್ಷಣಿಕ ಜಾಗೃತಿ ಮೂಡಿಸಬೇಕಾಗಿದೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಲ್.ಧರ್ಮ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾಭವನದಲ್ಲಿ ಗುರುವಾರ ಹಮ್ಮಿಕೊಂಡ ಪ.ಗೋ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೆ.ಎಂ. ಇಸ್ಮಾಯಿಲ್ ಕಂಡ ಕರೆಯವರಿಗೆ ಪ.ಗೋ ಪ್ರಶಸ್ತಿ ವಿತರಿಸಿ ಮಾತನಾಡುತ್ತಿದ್ದರು.
ಮಾಧ್ಯಮಗಳು ಪರಂಪರೆಯ ಕೊಂಡಿಯಾಗಿ ಉತ್ತಮ ಭವಿಷ್ಯ ರೂಪಿಸುವಲ್ಲಿ ಕಾರ್ಯ ನಿರ್ವಹಿಸುತ್ತಾ ಬಂದಿದೆ. ಮಂಗಳೂರು ವಿಶ್ವ ವಿದ್ಯಾನಿಲಯದ ಬೆಳವಣೆಗೆಯಲ್ಲಿ ಮಹತ್ವದ ಪಾತ್ರವಹಿಸಿದೆ. ಯುವ ಜನರಲ್ಲಿ ಕಲಿಕೆಯ ಬಗ್ಗೆ ಇರುವ ನಿರಾಸಕ್ತಿಯನ್ನು ದೂರ ಮಾಡಿ ಜಾಗೃತಿ ಮೂಡಿಸಬೇಕಾಗಿದೆ ಎಂದು ಪಿ.ಎಲ್.ಧರ್ಮ ತಿಳಿಸಿದ್ದಾರೆ.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಮಾತನಾಡಿದರು.
ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ನ ಅಧ್ಯಕ್ಷ ರಾಮಕೃಷ್ಣ ಆರ್, ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ ಬಂಟ್ವಾಳ, ಪದ್ಯಾಣ ಗೋಪಾಲಕೃಷ್ಣರವರ ಪುತ್ರ ವಿಶ್ವೇಶ್ವರ ಭಟ್ , ಮ್ಯಾಮ್ ನ ಗೌರವಾಧ್ಯಕ್ಷ ವೇಣು ಶರ್ಮ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಡಸ್ಥಳ, ಹಿರಿಯ ಪತ್ರಕರ್ತ ಹಿಲರಿ ಕ್ರಾಸ್ತ, ಹರ್ಷ ಮೊದಲಾದ ವರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯ ದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಪ್ರೆಸ್ ಕ್ಲಬ್ ಉಪಾಧ್ಯಕ್ಷ ಆರಿಫ್ ಪಡುಬಿದ್ರೆ ಕಾರ್ಯಕ್ರಮ ನಿರೂಪಿಸಿದರು.