ಕೋಲಾರ: ನಗರ ಹೊರವಲಯದ ಹೊನ್ನೇನಹಳ್ಳಿಯ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಮಹಿಳೆಯರಿಗಾಗಿ ಉಚಿತ ಟೈಲರಿಂಗ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು (ಗ್ರಾ) ಜಿಲ್ಲೆಯ ಆಸಕ್ತ ಮಹಿಳೆಯರು ೧೮ ರಿಂದ ೪೫ ವರ್ಷ ವಯೋಮಿತಿಯುಳ್ಳವರು ಮೇ ೨೩, ಗುರುವಾರದಂದು ಬೆಳಗ್ಗೆ ೧೧ಕ್ಕೆ, ತರಬೇತಿ ಸಂಸ್ಥೆಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ರೇಷನ್ ಕಾರ್ಡ್, ಆಧಾರ್ ಕಾಡ್, ೩ ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಭಾಗವಹಿಸಬಹುದು.
ತರಬೇತಿಯು ೩೦ ದಿನಗಳ ಕಾಲಾವಧಿಯದಾಗಿದ್ದು, ತರಬೇತಿ ಅವಧಿಯಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕೊಡಿಸಲಾಗುತ್ತದೆ. ಅಭ್ಯರ್ಥಿಗಳಿಗೆ ತರಬೇತಿ ವೇಳೆ ಉಚಿತವಾಗಿ ಊಟ ಹಾಗೂ ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ. ತರಬೇತಿ ನಂತರ ಕೇಂದ್ರ ಸರ್ಕಾರದ ಪ್ರಮಾಣ ಪತ್ರ ವಿತರಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ತರಬೇತುದಾರರ ಮೊ.೮೯೭೧೩೦೮೭೭೬, ೭೭೬೦೩೧೩೮೩೩, ೯೪೮೩೬೫೨೨೪೦, ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.