ಬೆಂಗಳೂರು: ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2024 ರ 68 ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 27 ರನ್ಗಳಿಂದ ಸೋಲಿಸಿ ಭರ್ಜರಿ ಜಯಗೊಳಿಸಿದೆ. ಈ ಮೂಲಕ ಆರ್ಸಿಬಿ ಪ್ಲೇ ಆಫ್ಗೆ ರಾಯಲ್ ಎಂಟ್ರಿ ಕೊಡ್ಡಿದೆ, RCB ಗೆಲುವು ಸಾಧಿಸುತ್ತಿದ್ದಂತೆ ಬೆಂಗಳೂರು ತಂಡದ ಅಭಿಮಾನಿಗಳು, ನಗರದ ಬೀದಿ ಬೀದಿಗಳಲ್ಲಿ ಕುಣಿದು ಕುಪ್ಪಳಿಸಿ, ಪಟಾಕಿ ಸಿಡಿಸಿ ಹಬ್ಬ ಮಾಡಿದ್ದಾರೆ. ಇನ್ನು ಮತ್ತೊಂದೆಡೆ ರಾಜ್ಯದ ಸಿಎಂ ಸಿದ್ದರಾಮಯ್ಯನವರು ಆರ್ಸಿಬಿ ಗೆಲುವಿನ ಬಗ್ಗೆ ಟ್ವೀಟ್ ಮಾಡಿದ್ದಾರೆ.
ಸತತ 6ನೇ ಗೆಲುವಿನೊಂದಿಗೆ RCB ಪ್ಲೇಆಫ್ ರೌಂಡ್ಗೆ ಲಗ್ಗೆ ಇಟ್ಟಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯದ ಪ್ರತಿಕ್ಷಣವನ್ನು ಆನಂದಿಸಿದೆ. RCB ಐತಿಹಾಸಿಕ ಗೆಲುವಿನ ಕ್ಷಣಗಳಿಗೆ ಸಾಕ್ಷಿಯಾಗಿದ್ದು ಖುಷಿ ನೀಡಿದೆ. ಇದು ನಮ್ಮ ಆರ್ಸಿಬಿ ತಂಡದ ಹೊಸ ಅಧ್ಯಾಯ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.