ಮೈಸೂರು: ಕೇರಳದ ವೈನಾಡು ಭಾಗದಲ್ಲಿ ಉತ್ತಮ ಮಳೆಯಾಗಿದ್ದು, ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವಿನ ಪ್ರಮಾಣ 1,861 ಕ್ಯುಸೆಕ್ ಗೆ ಏರಿಕೆಯಾಗಿದೆ. ಕಬಿನಿ ಜಲಾಶಯವು ಸಮುದ್ರ ಮಟ್ಟದಿಂದ 2,284 ಅಡಿ ಗರಿಷ್ಠ ಸಾಮರ್ಥ್ಯ ಹೊಂದಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 2,257 ಅಡಿಯಾಗಿದೆ. ಕಬಿನಿ ಜಲಾಶಯದಲ್ಲಿ 6.36 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯದಿಂದ ಮೈಸೂರು, ಬೆಂಗಳೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಕುಡಿಯುವ ನೀರಿಗಾಗಿ 300 ಕ್ಯುಸೆಕ್ ನೀರು ಹೊರ ಹರಿವಿನ ಪ್ರಮಾಣ ಹೆಚ್ಚಳವಾಗಿದೆ.