ಮೈಸೂರು: ಲೋಕಸಭೆ ಚುನಾವಣೆ ಮುಗಿದ ಕೂಡಲೇ ಜಿಪಂ, ತಾಪಂ, ಬಿಬಿಎಂಪಿ ಚುನಾವಣೆ ನಡೆಯಲಿದೆ ಎಂದು ಮೈಸೂರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿಗೆ ಚುನಾವಣೆ ನಡೆಸಲು ನಾವು ತಯಾರಿದ್ದೇವೆ. ಲೋಕಸಭೆ ಚುನಾವಣೆ ನೀತಿ ಸಂಹಿತೆ ಮುಗಿದ ಕೂಡಲೇ ಚುನಾವಣೆ ಮಾಡುತ್ತೇವೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಗತ್ಯವಾದ ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಮೊದಲು ಕ್ಷೇತ್ರ ಪುನರ್ ವಿಂಗಡನೆ ಆಗುತ್ತೆ. ನಂತರ ಮೀಸಲಾತಿ ಪ್ರಕಟಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದರು.