ಮೈಸೂರು: ಪ್ರಜ್ವಲ್ ಮೇಲೆ ರೇಪ್, ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳಿವೆ. ಈ ವಿಚಾರವನ್ನು ಡೈವರ್ಟ್ ಮಾಡಲು ಕುಮಾರಸ್ವಾಮಿ ಅವರು ಡಿಕೆಶಿ ಹೆಸರು ಹೇಳುತ್ತಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ.ಕೆ. ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ವಿಚಾರಣೆಗೆ ಒಳಪಡಿಸಿ ಎಂಬ ಕುಮಾರಸ್ವಾಮಿ ಹೇಳಿಕೆ ಸಂಬಂಧ ಡಿಕೆ ಶಿವಕುಮಾರ್ ಪರ ಸಿಎಂ ಸಿದ್ದರಾಮಯ್ಯ ಬ್ಯಾಟ್ ಬೀಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ಪ್ರಜ್ವಲ್ ರೇವಣ್ಣ ಅಪರಾಧಿ ಅಲ್ಲ ಆರೋಪಿ ಅಂತ ಹೇಳಿದ್ದಾರೆ. ನಾನೂ ಅದನ್ನೇ ಹೇಳುತ್ತೇನೆ. ನಾನು ಆರೋಪಿ ಅಂತಲೇ ಹೇಳುತ್ತಿರುವುದು ಎಂದರು. ಇನ್ನು ದೇವೇಗೌಡರ ಕುಟುಂಬದಿಂದ ಪ್ರಜ್ವಲ್ ಹೊರಹಾಕುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ದೇವೇಗೌಡರು ಹಾಗೂ ಅವರ ಮನೆಯವರಿಗೆ ಗೊತ್ತಿಲ್ಲದೇ ಮನೆಯಿಂದ ಹೋಗಿದ್ದಾನ ? ಪ್ರಜ್ವಲ್ ಅವರ ಕುಟುಂಬದವರ ಸಂಪರ್ಕದಲ್ಲಿ ಇಲ್ಲವಾ? ಪ್ರಜ್ವಲ್ ಪರ ವಿಚಾರಕ್ಕೆ ಹೋದಾಗ ನನ್ನ ಮಗ ಎಂದಿದ್ದರು. ಆ ಹೇಳಿಕೆ ಅವರ ಸಂಪರ್ಕದಲ್ಲಿ ಇದ್ದ ಹಾಗೆ ಅಲ್ವ ? ಪ್ರಜ್ವಲ್ ವಿಚಾರ ಅವರ ಕುಟುಂಬಕ್ಕೆ ಎಲ್ಲವೂ ಗೊತ್ತಿದೆ ಎಂದರು.