ದೇವನಹಳ್ಳಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕಂಪ್ಯೂಟರ್ ಡಿಟಿಪಿ ಮತ್ತು ಗ್ರಾಫಿಕ್ ಡಿಸೈನಿಂಗ್ ಕುರಿತ 45 ದಿನಗಳ ಉಚಿತ ತರಬೇತಿಯು ಜು.10ರಿಂದ ಆಯೋಜಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆದಾರ ವಯೋಮಿತಿ 18 ರಿಂದ 45 ವರ್ಷ ಒಳಗಿರಬೇಕು. ಕನ್ನಡ, ಆಂಗ್ಲ ಭಾಷೆಯನ್ನು ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್, ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಜೂ.15 ಕೊನೆಯ ದಿನವಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.