ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಕುನ್ನಹಳ್ಳಿ ಗ್ರಾಮದಲ್ಲಿ ವಿದ್ಯುತ್ ಶಾಕ್ ನಿಂದ ಕಾರ್ಮಿಕ ಮರದಲ್ಲೇ ಮೃತಪಟ್ಟಿದ್ದಾರೆ .
ಚಂದ್ರಪ್ಪ (45) ಮೃತ ದುರ್ದೈವಿ. ಸಿಲ್ವರ್ ಮರದ ಅಡ್ಡ ಕೊಂಬೆಗಳನ್ನು ಕಡಿಯುವಾಗ ತೋಟದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿಯಿಂದ ವಿದ್ಯುತ್ ಪ್ರವಹಿಸಿ ಅವಘಡ ಸಂಭವಿಸಿದ್ದು,
ಮರದ ಮೇಲಿದ್ದಾಗಲೇ ಮೃತಪಟ್ಟಿದ್ದಾನೆ. ಮೂಡಿಗೆರೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.