ಟೆಕ್ಸಾಸ್ನ ಗ್ರ್ಯಾಂಡ್ ಪ್ರೈರಿ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ ಹಾಗೂ ಅಮೆರಿಕ ನಡುವಿನ ರಣರೋಚಕ ಪಂದ್ಯದಲ್ಲಿ ಆತಿಥೇಯ ಅಮೆರಿಕ ತಂಡ ಸೂಪರ್ ಓವರ್ನಲ್ಲಿ (Super Over) ಪಂದ್ಯವನ್ನು ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 159 ರನ್ ಕಲೆಹಾಕಿತು. ಗೆಲುವಿಗೆ 160 ರನ್ಗಳ ಟಾರ್ಗೆಟ್ ಬೆನ್ನಟ್ಟಿದ ಅಮೆರಿಕ ಕೂಡ 20 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 159 ರನ್ ಕಲೆಹಾಕಿತು. ಹೀಗಾಗಿ ಪಂದ್ಯ ಸೂಪರ್ ಓವರ್ನತ್ತ ಸಾಗಿತು. ಸೂಪರ್ ಓವರ್ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಮೆರಿಕ ತಂಡ 19 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ ತಂಡ 1 ವಿಕೆಟ್ ಕಳೆದುಕೊಂಡು 13 ರನ್ಗಳನಷ್ಟೇ ಕಲೆಹಾಕಲು ಶಕ್ತವಾಗಿ 5 ರನ್ಗಳಿಂದ ಸೋಲೊಪ್ಪಿಕೊಂಡಿತು.