ದೇವನಹಳ್ಳಿ: ತಾಲೂಕಿನ ಕನ್ನಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಲತೊರೆ ಗ್ರಾಮದಲ್ಲಿ 3.90 ಲಕ್ಷ ಅನುದಾನದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ದೊರೆತಿದೆ.
ಈ ವೇಳೆ ಗ್ರಾಪಂ ಸದಸ್ಯ ಲಕ್ಷ್ಮಿಕಾಂತ್ ಮಾತನಾಡಿ, ಕನ್ನಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿಯೊಂದು ಗ್ರಾಮಗಳಲ್ಲಿ ಮೂಲಸೌಕರ್ಯಗಳಿಗೆ ಪ್ರಾಮುಖ್ಯತೆ ಕೊಟ್ಟು ರಸ್ತೆಗಳನ್ನು ಸುಸಜ್ಜಿತವಾಗಿ ನಿರ್ಮಿಸಲಾಗುತ್ತಿದೆ. ಅವುಗಳನ್ನು ನಿರ್ವಹಣೆ ಮತ್ತು ರಸ್ತೆಯ ಬದಿಗಳಲ್ಲಿ ಕಸವನ್ನು ಬಿಸಾಡುವುದು ಮಾಡಬಾರದು, ಸಾರ್ವಜನಿಕ ಆಸ್ತಿಗಳನ್ನು ನಮ್ಮದು ಎಂದು ಭಾವಿಸಿ ಸ್ವಚ್ಛವಾಗಿಡುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು.
ಪಿಡಿಒ ಶ್ರೀನಿವಾಸ್, ಗ್ರಾಪಂ ಅಧ್ಯಕ್ಷ ಅಧ್ಯಕ್ಷೆ ಗೌರಮ್ಮ ಮೂರ್ತಿ, ಉಪಾಧ್ಯಕ್ಷ ವೆಂಕಟಸ್ವಾಮಿ (ಅಪ್ಪು) ಸದಸ್ಯರಾದ ನೇತ್ರಾವತಿ, ಅಂಬುಜಾ ವೆಂಕಟೇಶ್ ಮತ್ತಿತರರಿದ್ದರು.
ಫೋಟೋ: ದೇವನಹಳ್ಳಿ ತಾಲೂಕಿನ ಕನ್ನಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಲತೊರೆ ಗ್ರಾಮದಲ್ಲಿ ಸಿಸಿ ರಸ್ತೆಗೆ ಚಾಲನೆ ದೊರೆಯಿತು.