ಪ್ರತಿನಿಧಿ ವರದಿ ಮೈಸೂರು
ಹಾಸನ ಲೋಕಸಭಾ ಕ್ಷೇತ್ರದ ನೂತನ ಸಂಸದ ಶ್ರೇಯಸ್ ಪಟೇಲ್ ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದರು. ತಮ್ಮ ಕುಟುಂಬ ಸದಸ್ಯರೊಂದಿಗೆ ಸುತ್ತೂರು ಮಠಕ್ಕೆ ಆಗಮಿಸಿದ ಸಂಸದ ಶ್ರೇಯಸ್ ಪಟೇಲ್, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧೆ ಮಾಡಿದ್ದ ಶ್ರೇಯಸ್ ಪಟೇಲ್, ತಮ್ಮ ಎದುರಾಳಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದರು. ಸುತ್ತೂರು ಮಠಕ್ಕೆ ಆಗಮಿಸಿದ ಸಂಸದ ಶ್ರೇಯಸ್ ಪಟೇಲ್ ಅವರಿಗೆ ಮೈಸೂರಿನ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸಾಥ್ ನೀಡಿದರು.
Leave a comment