ನವದೆಹಲಿ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಭರ್ಜರಿ ಗೆದ್ದಿರುವ ಮಾಜಿ ಮುಖ್ಯಮಂತ್ರಿ, ಸಂಸದ ಹೆಚ್ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಾರೆ ಎಂದು ಬಿಜೆಪಿ ನೂತನ ಸಂಸದ ಡಾ.ಮಂಜುನಾಥ್ ಹೇಳಿದರು. ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೆಚ್.ಡಿ. ಕುಮಾರಸ್ವಾಮಿಯವರು ಸಚಿವರಾಗುತ್ತಿರುವುದು ಖುಷಿ ತಂದಿದೆ. ಜೆಡಿಎಸ್ ಪಕ್ಷದ ನಾಯಕರು, ಕಾರ್ಯಕರ್ತರಿಗೆ ಆತ್ಮವಿಶ್ವಾಸ ತುಂಬಿದೆ ಎಂದರು.