ಮಡಿಕೇರಿ: ಕರ್ನಾಟಕ ಸರ್ಕಾರದಿಂದ ಮೈಸೂರಿನಲ್ಲಿ ಸ್ಥಾಪಿತವಾಗಿರುವ ರಂಗಾಯಣ ರೆಪರ್ಟರಿಯಲ್ಲಿ ಹತ್ತು ತಿಂಗಳ ಡಿಪ್ಲೊಮೊ ಕೋರ್ಸ್ ಗೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು. ಕನಿಷ್ಠ ದ್ವಿತೀಯ ಪಿಯುಸಿ (10+2) ಅಥವಾ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿರಬೇಕು. ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಗೊಳಿಸಿದ ಕಡೆಯ ದಿನಾಂಕಕ್ಕೆ 18 ವರ್ಷಗಳು ತುಂಬಿದ ಮತ್ತು 28 ವರ್ಷ ದಾಟಿರಬಾರದು. ರಂಗಾಯಣದಿಂದಲೇ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು ಮತ್ತು ಮಾಹೆಯಾನ 5,000 ರೂ.ಗಳ ವಿದ್ಯಾರ್ಥಿ ವೇತನ ಪಾವತಿಸಲಾಗುವುದು.
ಭಾರತೀಯ ರಂಗಶಿಕ್ಷಣ ಕೇಂದ್ರಕ್ಕೆ ಸೇರಬಯಸುವ ವಿದ್ಯಾರ್ಥಿಗಳು ರಂಗಾಯಣದ ವೆಬ್ಸೈಟ್ ನಲ್ಲಿ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ಅಥವಾ ರಂಗಾಯಣದ ಕಚೇರಿ ಅವಧಿಯಲ್ಲಿ ಖುದ್ದಾಗಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಅರ್ಜಿ ಶುಲ್ಕ ಸಾಮಾನ್ಯ ವರ್ಗ ರೂ.230, ಪ.ಜಾ, ಪ.ವರ್ಗ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.180 ಗಳು, ರಂಗಕೈಪಿಡಿ ಶುಲ್ಕ ರೂ.30 ಒಳಗೊಂಡಂತೆ ಡಿ.ಡಿ.ಯನ್ನು ಉಪ ನಿರ್ದೇಶಕರು, ರಂಗಾಯಣ, ಮೈಸೂರು ಇವರ ಹೆಸರಿನಲ್ಲಿ ಪಡೆದು ರಂಗಾಯಣದ ವಿಳಾಸಕ್ಕೆ ಜೂ.20 ರೊಳಗೆ ತಲುಪುವಂತೆ ಅಂಚೆಯ ಮೂಲಕ ಕಳುಹಿಸಬಹುದು.
ಸಂದರ್ಶನದ ದಿನಾಂಕವನ್ನು ಅಭ್ಯರ್ಥಿಗಳಿಗೆ ಪತ್ರ ಮುಖೇನ ತಿಳಿಸಲಾಗುವುದು. ರಂಗಾಯಣದ ಆವರಣದಲ್ಲಿ ನಡೆಯುವ ಈ ಸಂದರ್ಶನಕ್ಕೆ ವಿದ್ಯಾರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲೇ ಹಾಜರಾಗಬೇಕು. ಗರಿಷ್ಠ 15 ರಿಂದ 20 ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಾವಕಾಶವಿರುತ್ತದೆ. ಹೆಚ್ಚಿನ ವಿವರಕ್ಕೆ ದೂ.ಸಂ.0821-2512639, 9148827720 ನ್ನು ಸಂಪರ್ಕಿಸಬಹುದು ಎಂದು ಮೈಸೂರು ರಂಗಾಯಣದ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.