ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಸಲಹೆ
ಪ್ರತಿನಿಧಿ ವರದಿ ಮಡಿಕೇರಿ
ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಕ್ತನಿಧಿ ಕೇಂದ್ರ, ಜಿಲ್ಲಾಸ್ಪತ್ರೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಸೋಮವಾರಪೇಟೆ ತಾಲೂಕು, ಕೊಡಗು ವಿಶ್ವ ವಿದ್ಯಾಲಯ, ಭಾರತೀಯ ರೆಡ್ಕ್ರಾಸ್ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಚಿಕ್ಕ ಅಳುವಾರ ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಕ್ಯಾಂಪಸ್ನಲ್ಲಿ ವಿಶ್ವ ರಕ್ತದಾನಿಗಳ ದಿನವನ್ನು ಆಚರಿಸಲಾಯಿತು.
ಹೆಚ್ಚು ಬಾರಿ ರಕ್ತದಾನ ಮಾಡಿದ ರಕ್ತದಾನಿಗಳನ್ನು ಸನ್ಮಾನಿಸಲಾಯಿತು. ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಆಲೂರ ಉದ್ಘಾಟಿಸಿ ಮಾತನಾಡಿ, ಮುಂಬರುವ ದಿನಗಳಲ್ಲಿ ಕೊಡಗು ವಿಶ್ವ ವಿದ್ಯಾಲಯಕ್ಕೆ ಒಳಪಟ್ಟ ಎಲ್ಲ ಕಾಲೇಜುಗಳಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಲು ಕ್ರಮವಹಿಸುವ ಬಗ್ಗೆ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಮಾತನಾಡಿ, ಡೆಂಘೆ ಜ್ವರ ಇರುವ ಕಾರಣ ರಕ್ತ ಹಾಗೂ ಪ್ಲೇಟ್ಲೇಟ್ಗಳ ಅವಶ್ಯಕತೆ ತುಂಬಾ ಇದೆ. ಆದ್ದರಿಂದ ಎಲ್ಲರೂ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವಂತೆ ತಿಳಿಸಿದರು.
ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಕರುಂಬಯ್ಯ ಅವರು ಅರಿವು ಮೂಡಿಸಿದರು.
ವಿಶ್ವವಿದ್ಯಾಲಯದ ಕುಲಸಚಿವ ಡಾ.ಸೀನಪ್ಪ ರಕ್ತದಾನದ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.
ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಆನಂದ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಕೆ.ಶಾಂತಿ, ಜಿಲ್ಲಾ ಮೇಲ್ವಿಚಾರಕರಾದ ಸುನಿತಾ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಉಷಾ, ಕಮಲ, ಮುತ್ತಮ್ಮ ಇದ್ದರು.
ಫೋಟೋ 15 ಎಂಡಿಕೆ 03 ; ಚಿಕ್ಕ ಅಳುವಾರ ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಕ್ಯಾಂಪಸ್ನಲ್ಲಿ ಆಯೋಜಿಸಿದ್ದ ವಿಶ್ವ ರಕ್ತದಾನಿಗಳ ದಿನಾಚರಣೆಯಲ್ಲಿ ರಕ್ತದಾನಿಗಳನ್ನು ಸನ್ಮಾನಿಸಲಾಯಿತು.