ಚಿಕ್ಕಮಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ 2024-25ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜು.10 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ ಸೈಟ್ ನಲ್ಲಿ ಅಥವಾ ದಕ್ಷಿಣ ಕನ್ನಡ ದೂ.ಸಂ.0824-2225078, ಉಡುಪಿ-0820-2574881, ಉತ್ತರ ಕನ್ನಡ-08382-226589 ಜಿಲ್ಲೆಗಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಛೇರಿಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
—————————
ಬೆಳೆ ವಿಮೆ ನೋಂದಣಿ
ಚಿಕ್ಕಮಗಳೂರು: ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ಹೋಬಳಿ ಮಟ್ಟ ಹಾಗೂ ಗ್ರಾಪಂ ಮಟ್ಟಕ್ಕೆ ಆಯ್ದ ಬೆಳೆಗಳನ್ನು ಅಧಿಸೂಚಿಸಲಾಗಿದೆ.
ರೈತರು ಅಧಿಸೂಚಿತ ಬೆಳೆಗಳಿಗೆ ನಿಗದಿತ ಅವಧಿಯೊಳಗೆ ಸಂಬಂಧಿಸಿದ ಬ್ಯಾಂಕ್ನಲ್ಲಿ ನೊಂದಾಯಿಸಿಕೊಳ್ಳಬಹುದಾಗಿದೆ. ಮಳೆ ಆಶ್ರಿತ ಭತ್ತ, ರಾಗಿ, ಮುಸುಕಿನಜೋಳ, ಆಲೂಗಡ್ಡೆ, ಸೂರ್ಯಕಾಂತಿ, ಎಳ್ಳು, ಹತ್ತಿ, ಈರುಳ್ಳಿ, ಎಲೆ ಕೋಸು, ಟೊಮಾಟೊ ಮತ್ತು ನೀರಾವರಿ ಭತ್ತಕ್ಕೆ ನೊಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರ ಕಛೇರಿಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
——————
ಜಾಗೃತಿ ಉಸ್ತುವಾರಿ ಸಮಿತಿಗೆ ಅರ್ಜಿ ಆಹ್ವಾನ
ಚಿಕ್ಕಮಗಳೂರು: ಜಿಲ್ಲಾ ಉಪ ವಿಭಾಗ ಮಟ್ಟದ ಅನುಸೂಚಿತ ಜಾತಿ/ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಾಗೃತಿ ಉಸ್ತುವಾರಿ ಸಮಿತಿ ಸದಸ್ಯರಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂ.24 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿ ಹಾಗೂ ಮೂಡಿಗೆರೆ, ಕೊಪ್ಪ, ಕಳಸ ಮತ್ತು ಶೃಂಗೇರಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ (ಗ್ರೇಡ್-2) ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು (ಗ್ರೇಡ್-1) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
——————–
ನ್ಯಾಯಾಂಗ ಆಡಳಿತ ತರಬೇತಿಗಾಗಿ ಅರ್ಜಿ
ಚಿಕ್ಕಮಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿನ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಸಲ್ಲಿಸಲು ಜೂ.29 ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಮಟ್ಟದ ಕಾನೂನು ಪದವೀಧರ ಆಯ್ಕೆ ಸಮಿತಿ ಸದಸ್ಯ ಕಾರ್ಯದರ್ಶಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.