ಮೈಸೂರು: ಸಾರ್ವಜನಿಕರ ಕುಂದು-ಕೊರತೆಗಳನ್ನು ಶೀಘ್ರವಾಗಿ ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವತಿಯಿಂದ ತಾಲೂಕಿನ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬೆಳಗ್ಗೆ 10ಕ್ಕೆ ಜನಸ್ಪಂದನ ಕಾರ್ಯಕ್ರಮ ನಡೆಯಲಿದ್ದು, ಮೈಸೂರು ತಾಲೂಕಿನ ಸಾರ್ವಜನಿಕರು ಮನವಿ ಹಾಗೂ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
================
ಸಂಸದ ಯದುವೀರಗೆ ಸನ್ಮಾನ ನಾಳೆ
ಹುಣಸೂರು: ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಹುಣಸೂರಿನ ಜನತೆಗೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ಜೂ.21ರಂದು ಕೃತಜ್ಞತಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಸಮಾರಂಭ ನಡೆಯಲಿದ್ದು, ಮೈಸೂರು-ಕೊಡಗು ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಲು ನೆರವಾದ ಹುಣಸೂರು ತಾಲೂಕಿನ ಮತದಾರರಿಗೆ ಯದುವೀರ ಒಡೆಯರ್ ಅವರು ಕೃತಜ್ಞತೆ ಸಲ್ಲಿಸಲಿದ್ದಾರೆ. ಇದೇ ವೇಳೆ ಹುಣಸೂರಿನ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಸಂಸದರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಶಾಸಕ ಜಿ.ಡಿ.ಹರೀಶ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದು, ಸ್ಥಳೀಯ ಬಿಜೆಪಿ, ಜೆಡಿಎಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ.