ಪ್ರತಿನಿಧಿ ವರದಿ ಹಾಸನ
ನಗರದ ಕೆ.ಆರ್.ಪುರಂನಲ್ಲಿರುವ ಸಂಜೀವಿನಿ ಆಸ್ಪತ್ರೆ ಆವರಣದಲ್ಲಿ ಜೂ.23ರಿಂದ 25ರ ವರೆಗೆ ಉಚಿತ ಕೃತಕ ಕಾಲು ಜೋಡಣಾ ಶಿಬಿರವನ್ನು ಹಮ್ಮಿಕೊಂಡಿರುವುದಾಗಿ ಆಸ್ಪತ್ರೆಯ ಅಧ್ಯಕ್ಷ ಎಚ್.ಪಿ.ಸ್ವರೂಪ್ ತಿಳಿಸಿದರು.
ಆಸ್ಪತ್ರೆ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಕ್ರೋ ಲ್ಯಾಬ್ಸ್ ಪ್ರಾಯೋಜಕತ್ವದಲ್ಲಿ ರೋಟರಿ ಕ್ಲಬ್ ಹಾಸನ ಹೊಯ್ಸಳ, ರೋಟರಿ ಕ್ಲಬ್ ಹಾಸನ ಟೈಗರ್, ಸಂಜೀವಿನಿ ಸಹಕಾರಿ ಆಸ್ಪತ್ರೆ ಹಾಗೂ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ, ಶ್ರೀ ಭಗವಾನ್ ಮಹಾವೀರ್ ವಿಕಲಾಂಗ್ ಸಹಾಯತ ಸಮಿತಿ, ಜೈಪುರ್ ಸಹರ ಗ್ರೂಪ್ ಆಫ್ ಇಂಡಸ್ಟ್ರೀಸ್, ಇನ್ ವೀಲ್ ಕ್ಲಬ್ ಆಫ್ ಹಾಸನ್ ಗೋಲ್ಡ್, ಯೂತ್ ಹ್ಯಾಂಡ್ ಫೌಂಡೇಶನ್, ಕನ್ನಡ ರಕ್ಷಣಾ ವೇದಿಕೆ, ಭಾರತ್ ಸೇವಾ ದಳ ಸಂಘಟನೆಗಳು ಒಟ್ಟಾಗಿ ಕೈ ಜೋಡಿಸಿವೆ ಎಂದರು.
ಮುಂಗೈ, ಕೃತಕ ಕಾಲುಗಳು, ಪೋಲಿಯೋ ಪೀಡಿತರಿಗಾಗಿ ಕ್ಯಾಲಿಪರ್ಸ್ಗಳು ಉಚಿತವಾಗಿ ಕೊಡಲಾಗುವುದು. ಅಗತ್ಯ ಇರುವವರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಿದರು. ಹೆಚ್ಚಿನ ಮಾಹಿತಿಗಾಗಿ 9844046527, 9449644267ಗೆ ಸಂಪರ್ಕಿಸಬಹುದಾಗಿದೆ ಎಂದರು.
ಸಂಸ್ಥೆ ಉಪಾಧ್ಯಕ್ಷ ಎಚ್.ಆರ್.ಸುರೇಶ್, ಖಜಾಂಚಿ ಎಚ್.ಎನ್.ದೇವೇಗೌಡ, ಮಾಜಿ ಅಧ್ಯಕ್ಷ ಎಚ್.ಜೆ.ಗಣೇಶ್, ಕಾರ್ಯಾಧ್ಯಕ್ಷ ಡಿ.ಅರುಣ್ ಕುಮಾರ್, ಬಿ.ಜಿ.ಶ್ರೀಧರ್, ಬಿ.ಎನ್.ಜಯರಾಮ್, ಜಿ.ಎಸ್.ವಿಮಾಲ, ರೋ.ಮೋಹನ್ ಇತರರು ಉಪಸ್ಥಿತರಿದ್ದರು.