ಹಾಸನ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಾದರಿ ವೃತ್ತಿ ಕೇಂದ್ರದ ವತಿಯಿಂದ ಜೂ.27ರಂದು ಬೆಳಗ್ಗೆ 10.30ರಿಂದ 1.30 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ರೈಲ್ವೇ ಸ್ಟೇಷನ್ ಹತ್ತಿರ, ಸರ್ಕಾರಿ ಐ.ಟಿ.ಐ. ಕಾಲೇಜು ಆವರಣದಲ್ಲಿ ಉದ್ಯೋಗ ಮೇಳ ನಡೆಯಲಿದೆ.
ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದ್ದು, ಹಾಸನದ ಹೆಸರಾಂತ ಕಂಪನಿಗಳು ಭಾಗವಹಿಸುತ್ತಿವೆ. ಆಸಕ್ತಿಯುಳ್ಳ ಅಭ್ಯರ್ಥಿಗಳ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ./ಐ.ಟಿ.ಐ./ಪಿ.ಯು.ಸಿ/ಡಿಪ್ಲೊಮಾ/ಪದವಿ ಹೊಂದಿದ ಪುರುಷ/ಮಹಿಳಾ ಅಭ್ಯರ್ಥಿಗಳು ವಯೋಮಿತಿ 18ರಿಂದ 30 ನೇರ ಸಂದರ್ಶನದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುಬಹುದು. NCS(www.ncs.gov.in) ವೆಬ್ ಪೋರ್ಟಲ್ನಲ್ಲಿ ಉದ್ಯೋಗಾಕಾಂಕ್ಷಿ (Job Seeker) ಆಗಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ 08172-296374, 9449692691 ಹಾಗೂ 8722606874ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.