ಹಾಸನ: 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ನಗರದ ರಾಜೀವ್ ಆಯುರ್ವೇದ ಆಸ್ಪತ್ರೆ ಮತ್ತು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಸ್ವಸ್ಥವೃತ್ತ ಹಾಗೂ ಯೋಗ ವಿಭಾಗದ ವತಿಯಿಂದ ಸಾರ್ವಜನಿಕರಲ್ಲಿ ಯೋಗದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಯೋಗ ಜಾಥಾ-2024 ಅನ್ನುಆಯೋಜಿಸಲಾಗಿತ್ತು.
ಪ್ರಾಂಶುಪಾಲ ಡಾ.ಎಸ್.ಎ.ನಿತಿನ್ ಹಸಿರು ನಿಶಾನೆ ತೋರುವುದರ ಮೂಲಕ ಜಾಥಾ ಕಾರ್ಯಕ್ರಮಕ್ಕೆಚಾಲನೆ ನೀಡಿದರು. ಯೋಗ ಜಾಥವು ನಗರದ ಹೌಸಿಂಗ್ ಬೋರ್ಡ್, ಹೊಯ್ಸಳ ನಗರದ ಪ್ರಮುಖ ರಸ್ತೆಗಳಲ್ಲಿ ಚಲಿಸಿತು. ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ಜಾಥಾದಲ್ಲಿ ಭಾಗವಹಿಸಿದ್ದರು.