ಬೆಂಗಳೂರು: ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರ ಬಗ್ಗೆ ಅವರ ಅಭಿಮಾನಿಗಳಿಗೆ ಪ್ರಚೋದಿಸುತ್ತಿದ್ದ ಆರೋಪದಲ್ಲಿ ಚೇತನ್ ಎಂಬುವವರನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಐಪಿಸಿ ಸೆಕ್ಷನ್ 504, 506 ಅಡಿ ಎಫ್ಐಆರ್ ದಾಖಲಾಗಿದೆ. ಆರೋಪಿ ಚೇತನ್ ಕೂಡ ದರ್ಶನ್ ಫ್ಯಾನ್ ಆಗಿದ್ದು ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದ ಹಾಘೂ ದರ್ಶನ್ ಅಭಿಮಾನಿಗಳಿಗೆ ಪ್ರಚೋದನೆ ಮಾಡಿದ್ದ. ಈ ಹಿನ್ನೆಲೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಜೈಲು ಸೇರಿದ ನಟ ದರ್ಶನ್ ಬಗ್ಗೆ ಉಮಾಪತಿ ಗೌಡ ಅವರು ಮಾತಾಡಿದ್ದರು. ಈ ಬಗ್ಗೆ ನಟ ದರ್ಶನ್ ಫ್ಯಾನ್ ಆಗಿರುವ ಚೇತನ್ ಕೋಪಗೊಂಡಿದ್ದು ಡಿ ಬಾಸ್ ಬಗ್ಗೆ ಮಾತನಾಡಿದರಲ್ಲಾ ಎಂದು ರೊಚ್ಚಿಗೆದ್ದು ಉಮಾಪತಿ ಗೌಡಗೆ ಬೆದರಿಕೆ ಹಾಕಿದ್ದ. ಅಷ್ಟೇ ಅಲ್ಲದೆ ಉಮಾಪತಿ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ. ಹಾಗೂ ದರ್ಶನ್ ಇತರೆ ಅಭಿಮಾನಿಗಳಿಗೆ ಪ್ರಚೋದಿಸುತ್ತಿದ್ದ. ಈ ಬಗ್ಗೆ ನಿರ್ಮಾಪಕ ಉಮಾಪತಿ ಗೌಡ ದೂರು ನೀಡಿದ್ದು ಸದ್ಯ ಬಸವೇಶ್ವರ ನಗರ ಪೊಲೀಸರು ಚೇತನ್ನನ್ನು ಬಂಧಿಸಿ ಠಾಣೆಗೆ ಕರೆದೊಯ್ದಿದ್ದಾರೆ.