ಪ್ರತಿನಿಧಿ ವರದಿ ದೇವನಹಳ್ಳಿ
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆಯು ತಾಂತ್ರಿಕ ಕಾರಾಣಾಂತರಗಳಿಂದ ತಡೆಯಾಗಿರಬಹುದು. ಮುಂದಿನ ದಿನಗಳಲ್ಲಿ ಪ್ರತಿಯೊಬ್ಬ ಪಲಾನುಭವಿಗಳಿಗೆ ತಲುಪುವಂತೆ ಗಮನಹರಿಸುತ್ತೇವೆ ಎಂದು ಜಿಲ್ಲಾ ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಚನ್ನಹಳ್ಳಿ ಬಿ.ರಾಜಣ್ಣ ಹೇಳಿದರು.
ದೇವನಹಳ್ಳಿ ತಾಲೂಕಿನ ಬೀರಸಂದ್ರ ಬಳಿಯ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಅನುಷ್ಠಾನಕ್ಕೆ ತಂದಿರುವಂತಹ ಪಂಚ ಗ್ಯಾರಂಟಿಗಳ ಅನುಷ್ಠಾನದಲ್ಲಿನ ಅಡೆತಡೆಗಳನ್ನು ಬಗೆಹರಿಸಿ ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ಯೋಜನೆಗಳ ಸದುಪಯೋಗಪಡಿಸಿಕೊಳ್ಳುವಂತೆ ಮುನ್ನಡೆಸುವ ಜವಾಬ್ದಾರಿ ನಮಗೆ ನೀಡಿದೆ. ಈ ಜವಾಬ್ದಾರಿಯನ್ನು ನೆರವೇರಿಸುವಲ್ಲಿ ಕಾರ್ಯಪ್ರವೃತ್ತರಾಗಿದ್ದೇವೆ ಎಂದರು.
ಗ್ಯಾರಂಟಿ ಯೋಜನೆಗಳು ಮಧ್ಯಮ ವರ್ಗದ ಕುಟುಂಬದವರ ಆರ್ಥಿಕ ಅಭಿವೃದ್ಧಿಗೆ ಎಷ್ಟರ ಮಟ್ಟಿಗೆ ಸಹಾಯ ಆಗಿದೆ ಎಂಬುದು ಎಲ್ಲರಿಗೂ ತಿಳಿದಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಚ್. ಮುನಿಯಪ್ಪ, ಕಿಯೋನಿಕಸ್ಸ್ ಅಧ್ಯಕ್ಷರಾದ ಶರತ್ ಕುಮಾರ್ ಬಚ್ಚೇಗೌಡ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ .ಶಿವಶಂಕರ್ , ಸಿಇಒ ಅನುರಾಧ, ಅಧ್ಯಕ್ಷ ವಿ.ಶಾಂತಕುಮಾರ್, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಹಿತ್ತರಹಳ್ಳಿ ರಮೇಶ್ , ನಾರಾಯಣಸ್ವಾಮಿ, ಸದಸ್ಯರು, ಮುಖಂಡು,ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
5ಡಿಎಚ್ಎಲ್ ಪಿ-೧: ದೇವನಹಳ್ಳಿ ತಾಲೂಕಿನ ಬೀರಸಂದ್ರ ಬಳಿಯ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ನೂತನ ಕಛೇರಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಕೆಹೆಚ್. ಮುನಿಯಪ್ಪ ಉದ್ಘಾಟಿಸಿದರು.